Saturday, December 20, 2025

ನಟಿ ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ಹೊಸ ದಿಗಂತ ಡಿಜಿಟಲ್ ಡೆಸ್ಕ್:


ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ನಟಿ ನಿಧಿ ಅಗರ್​​ವಾಲ್ ಅವರಿಗೆ ಕಿರುಕುಳ ನೀಡಲಾಗಿದೆ.

ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ.

ನಿಧಿ ಅಗರ್​ವಾಲ್ ಅವರನ್ನು ಜನರು ಮುತ್ತಿಗೆ ಹಾಕಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಜನರಿಂದ ಕಿರಿಕಿರಿ ಅನುಭವಿಸಿದ ನಿಧಿ ಅವರನ್ನು ಬಾಡಿಗಾರ್ಡ್​​ಗಳು ರಕ್ಷಿಸಿದ್ದಾರೆ. ಅವರನ್ನು ಕರೆದುಕೊಂಡು ಬಂದು ಕಾರಿನಲ್ಲಿ ಕೂರಿಸುವ ವೇಳೆಗೆ ಬಾಡಿಗಾರ್ಡ್​​ಗಳು ಸುಸ್ತಾಗಿದ್ದಾರೆ.

ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸೂಕ್ತ ಅನುಮತಿ ಪಡೆಯದೆಯೇ ಕಾರ್ಯಕ್ರಮ ನಡೆಸಿದ ಆಯೋಜಕರ ಮೇಲೆ ಕೇಸ್ ದಾಖಲಾಗಿದೆ.

ನಿಧಿ ಅಗರ್​ವಾಲ್ ಅವರಿಗೆ ಈ ಘಟನೆಯಿಂದ ತುಂಬ ಬೇಸರ ಆಗಿದೆ. ಅವರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬಗ್ಗೆ ನಿಧಿ ಅಗರ್​ವಾಲ್ ಅವರು ಇನ್ನೂ ಹೇಳಿಕೆ ನೀಡಿಲ್ಲ. ಜನರು ನಡೆದುಕೊಂಡ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.

error: Content is protected !!