ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ನಿರಂತರ ನಡೆಯುತ್ತಿರುವ ಹಿಂಸಾಚಾರದಿಂದ ಬೇಸತ್ತ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ನಿರ್ಧರಿಸಿದ್ದಾರೆ. ಆದ್ರೆ ಈ ನಿರ್ಧಾರವನ್ನು ಬೆಂಬಲಿಗರು ತಡೆದಿದ್ದಾರೆ.
ಕಳೆದ 2 ತಿಂಗಳನಿಂದ ನಡೆಯುತ್ತಿರುವ ಹಿಂಸಾಚಾರದ ಹೊಣೆ ಹೊತ್ತು ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆಗೆ ನಿರ್ಧರಿಸಿ ಪತ್ರ ಹಿಡಿದು ರಾಜ್ಯಾಪಾಲರ ಭೇಟಿಯಾಗಲು ಹೊರಟಿದ್ದರು. ಆದ್ರೆ ಬಿರೇನ್ ಸಿಂಗ್‌ರನ್ನು ಬೆಂಬಲಿಗರು ತಡೆದಿದ್ದಾರೆ.
ಬಿರೇನ್ ನಿವಾಸ ಸುತ್ತ ಜಮಾಯಾಸಿದ ಬೆಂಬಲಿಗರು ಮಾನವ ಸರಪಳಿ ಹೋರಾಟ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದಾರೆ. ಜೊತೆಗೆ ಬಿರೇನ್ ಸಿಂಗ್ ಅವರ ರಾಜೀನಾಮೆ ಪತ್ರವನ್ನು ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೀಗ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ರಾಜಭವನಕ್ಕೆ ತೆರಳುವ ಮಾರ್ಗದಲ್ಲಿ ಜನರ ಭಾವನೆಗಳನ್ನು ಗೌರವಿಸಿ ರಾಜೀನಾಮೆ ನೀಡದಿರಲು ನಿರ್ಧರಿಸಿದ್ದಾರೆ ಎಂದು ಹಿರಿಯ ಸಚಿವ ಗೋವಿಂದಸ್ ಕೊಂತೌಜಮ್ ಹೇಳಿದ್ದಾರೆ.
ಹಿಂಸಾಚಾರದ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಉಗ್ರರ ರೀತಿ ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿ. ಬೆಂಕಿ ಹೆಚ್ಚಿ, ಸಮುದಾಯದ ಮೇಲೆ ದಾಳಿ ಮಾಡಿ ಆಕ್ರೋಶ ಹೊರಹಾಕುವುದಲ್ಲ. ಕಾನೂನಾತ್ಮ ರೀತಿಯಲ್ಲಿ ಸರ್ಕಾರದ ವಿರುದ್ಧ ಹೋರಾಡಬೇಕಿತ್ತು. ಆದರೆ ಕೆಲ ಸಮುದಾಯ ಹಾಗೂ ಗುಂಪುಗಳಿಗೆ ಈ ರೀತಿ ಹೋರಾಟಕ್ಕೆ ಯಾವುದೇ ವಿಷಯಗಳಿಲ್ಲ. ಹೀಗಾಗಿ ಹಿಂಸಾತ್ಮಕ ರೂಪದಲ್ಲಿ ಸರ್ಕಾರವನ್ನು ಬೆದರಿಸುವ ತಂತ್ರ ಮಾಡುತ್ತಿದ್ದಾರೆ. ಹೀಗಾಗಿ ಬೀರೆನ್ ಸಿಂಗ್ ರಾಜೀನಾಮೆ ನೀಡಬೇಕಿಲ್ಲ. ಮಣಿಪುರದ ಅಭಿವೃದ್ಧಿಗೆ ಬಿರೇನ್ ಸಿಂಗ್ ಶ್ರಮಿಸಿದ್ದಾರೆ ಎಂದು ಮಾನವ ಸರಪಳಿ ಹೋರಾಟ ಆರಂಭಿಸಿರುವ ಬೆಂಬಲಿಗರು ಹೇಳಿದ್ದಾರೆ.
ಕಳೆದ 2 ತಿಂಗಳಿನಿಂದ ಮಣಿಪುರದಲ್ಲಿ ಶಾಂತಿ ನೆಲೆಸುವ ವಿಶ್ವಾಸವಿದೆ. ಸಾಮಾನ್ಯರಿಗೆ ಬದಕಲು ಸಾಧ್ಯವಾಗುತ್ತಿಲ್ಲ. ಟಾರ್ಗೆಟ್ ಮಾಡಲಾಗುತ್ತಿದೆ. ಇಂತಹ ಕಠಿಣ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಿದರೆ ಪರಿಸ್ಥಿತಿ ಕೈಮೀರಲಿದೆ. ಬಿರೇನ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಬೆಂಬಲಿಗರು ಮನವಿ ಮಾಡಿದ್ದಾರೆ.