ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್ ವುಡ್ ನಟರಾದ ಶಿವರಾಜ್ ಕುಮಾರ್ , ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು, ಭರ್ಜರಿ ಕ್ರೆಜ್ ಮೂಡಿಸಿದೆ.
ಇದು ಅರ್ಜುನ್ ಜನ್ಯ ನಿರ್ದೇಶನ ಮಾಡುತ್ತಿರುವ ಮೊಟ್ಟ ಸಿನಿಮಾ ಆಗಿದೆ. ಸಿನಿಮಾದ ಬಗ್ಗೆ ರಾಜ್ಯದಲ್ಲಿ ಭರ್ಜರಿ ನಿರೀಕ್ಷೆಗಳಿವೆ. ರಾಜ್ಯದಲ್ಲಿ ಮಾತ್ರವಲ್ಲದೆ ವಿದೇಶದಲ್ಲಿಯೂ ಸಿನಿಮಾದ ಕ್ರೇಜ್ ಅದ್ಧೂರಿಯಾಗಿದೆ.
‘45’ ಸಿನಿಮಾವನ್ನು ಕನ್ನಡ ಮಾತ್ರವಲ್ಲದೆ ಇತರೆ ಕೆಲವು ಭಾಷೆಗಳಲ್ಲಿಯೂ ಬಿಡುಗಡೆ ಮಾಡಲು ಅರ್ಜುನ್ ಜನ್ಯ ಮತ್ತು ಚಿತ್ರತಂಡ ಮುಂದಾಗಿದೆ. ಅದರಂತೆ ದೇಶದಲ್ಲಿ ಮಾತ್ರವಲ್ಲದೆ ಹೊರ ದೇಶಗಳಲ್ಲಿಯೂ ಸಿನಿಮಾವನ್ನು ಅದ್ಧೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ.
ಕೆನಡಾನಲ್ಲಿ ‘45’ ಸಿನಿಮಾದ ಟಿಕೆಟ್ ಬುಕಿಂಗ್ ಈಗಾಗಲೇ ಆರಂಭವಾಗಿದ್ದು, ಮುಂಗಡ ಬುಕಿಂಗ್ನಲ್ಲಿಯೇ ಚಿತ್ರಮಂದಿರಗಳು ಹೌಸ್ಫುಲ್ ಆಗಿವೆ. ಕೆನಡಾದ ಕನ್ನಡ ಸಿನಿಮಾ ಪ್ರೇಮಿಗಳು ಮುಗಿಬಿದ್ದು ಟಿಕೆಟ್ ಖರೀದಿ ಮಾಡಿದ್ದು, ಸಿನಿಮಾ ಸೋಲ್ಡ್ ಔಟ್ ಆಗಿದೆ. ಅದು ಮಾತ್ರವೇ ಅಲ್ಲದೆ, ಕೆನಡಾನಲ್ಲಿ ಭಾರತಕ್ಕಿಂತಲೂ ಎರಡು ದಿನ ಮುಂಚಿತವಾಗಿ ‘45’ ಸಿನಿಮಾ ಬಿಡುಗಡೆ ಆಗಲಿರುವುದು ಮತ್ತೊಂದು ವಿಶೇಷ.
ಭಾರತದಲ್ಲಿ ‘45’ ಸಿನಿಮಾ ಡಿಸೆಂಬರ್ 25 ರಂದು ಬಿಡುಗಡೆ ಆಗಲಿದೆ. ಆದರೆ ಕೆನಡಾನಲ್ಲಿ ಡಿಸೆಂಬರ್ 23 ರಂದೇ ‘45’ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ. ಅಲ್ಲಿ ಕ್ರಿಸ್ಮಸ್ ರಜೆಗಳು ಚಾಲ್ತಿಯಲ್ಲಿದ್ದು, ಇದು ‘45’ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆಯನ್ನು ನೀಡುವ ಸಾಧ್ಯತೆ ಇದೆ.
‘45’ ಸಿನಿಮಾನಲ್ಲಿ ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿದ್ದಾರೆ. ಅರ್ಜುನ್ ಜನ್ಯಾ ನಿರ್ದೇಶನ ಮಾಡಿದ್ದಾರೆ. ಸಂಗೀತ ನಿರ್ದೇಶನವೂ ಅವರದ್ದೇ ಆಗಿದೆ. ಸಿನಿಮಾ, ಮಾನವ-ದಾನವ ಮತ್ತು ದೇವರು ಕುರಿತ ಕತೆಯನ್ನು ಒಳಗೊಂಡಿದೆ. ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆ ಆಗಿದ್ದು ಸಖತ್ ಗಮನ ಸೆಳೆಯುತ್ತಿದೆ.

