ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಕರಡು ಸಿದ್ಧ: ಶೀಘ್ರದಲ್ಲೇ ಸರ್ಕಾರಕ್ಕೆ ಹಸ್ತಾಂತರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಏಕರೂಪ ನಾಗರಿಕ ಸಂಹಿತೆ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರಾಖಂಡದಲ್ಲಿ ಈ ಕುರಿತ ಕರಡು ವರದಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ ಎಂದು ಕರಡು ಸಮಿತಿಯ ಸದಸ್ಯೆ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಸಾದ್ ದೇಸಾಯಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ. ಈ ಬಗ್ಗೆ ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ಕರಡು ಪ್ರತಿಯೊಂದಿಗೆ ತಜ್ಞರ ಸಮಿತಿಯ ವರದಿಯನ್ನು ಶೀಘ್ರದಲ್ಲೇ ಮುದ್ರಿಸಿ ಉತ್ತರಾಖಂಡ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು.

ಕಳೆದ ವರ್ಷ ಉತ್ತರಾಖಂಡ ಸರ್ಕಾರವು ಸ್ಥಾಪಿಸಿದ ತಜ್ಞರ ಸಮಿತಿಯ ಮುಖ್ಯಸ್ಥರಾದ ದೇಸಾಯಿ, ಸಮಿತಿಯು ಎಲ್ಲಾ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಸಂಹಿತೆಯನ್ನು ರಚಿಸಿದೆ. ಆಯ್ದ ದೇಶಗಳಲ್ಲಿನ ಶಾಸನಬದ್ಧ ಚೌಕಟ್ಟು ಸೇರಿದಂತೆ ವಿವಿಧ ಕಾನೂನುಗಳು ಪರಿಶೀಲಿಸಲಾಗಿದೆ. ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಚಾಲ್ತಿಯಲ್ಲಿರುವ ವಿವಿಧ ಸಾಂಪ್ರದಾಯಿಕ ಆಚರಣೆಗಳ ಅತೀ ಸೂಕ್ಷ್ಮ ವ್ಯತ್ಯಾಸಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ ಎಂದು ಅವರು ಹೇಳಿದ್ದಾರೆ.

ಸಮಿತಿಯು ರಚನೆಯಾದಾಗಿನಿಂದ ಇಲ್ಲಿಯವರೆಗೆ ಆನ್ಲೈನ್ ಮತ್ತು ಆಫ್ಲೈನ್ ಮಾಧ್ಯಮದ ಮೂಲಕ 2.5 ಲಕ್ಷಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಿದೆ. ಎಲ್ಲಾ 13 ಜಿಲ್ಲೆಗಳ ಮಧ್ಯಸ್ಥಗಾರರೊಂದಿಗೆ ನೇರವಾಗಿ ಸಂವಾದ ನಡೆಸಿದರುದೆಹಲಿಯಲ್ಲಿ ವಲಸಿಗ ಉತ್ತರಾಖಂಡದವರ ಜೊತೆ ಚರ್ಚೆ ನಡೆಸಲಾಗಿದೆ. ಈ ಮೂಲಕ ಏಕರೂಪ ನಾಗರಿಕ ಸಂಹಿತೆಯನ್ನು(ಯುಸಿಸಿ) ರೂಪಿಸಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಉತ್ತರಾಖಂಡ ಪಾತ್ರವಾಗಲಿದೆ.

ಮಹಿಳೆಯರು, ಮಕ್ಕಳು ಮತ್ತು ಅಂಗವಿಕಲರನ್ನು ಗಮನದಲ್ಲಿಟ್ಟುಕೊಂಡು ಲಿಂಗ ಸಮಾನತೆಯನ್ನು ಖಚಿತಪಡಿಸುವುದು. ನಾವು ಅನಿಯಂತ್ರಿತತೆ ಮತ್ತು ತಾರತಮ್ಯವನ್ನು ತೊಡೆದುಹಾಕುವ ಮೂಲಕ ಎಲ್ಲರನ್ನೂ ಸಮಾನ ಹೆಜ್ಜೆಯಲ್ಲಿ ತರಲು ಪ್ರಯತ್ನಿಸಿದ್ದೇವೆ. ಸಮಿತಿಯು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಅಧ್ಯಯನ ಮಾಡಿದೆ. ಆದರೆ ಅದರ ಹೆಸರುಗಳನ್ನು ಹಂಚಿಕೊಳ್ಳಲು ದೇಸಾಯಿ ನಿರಾಕರಿಸಿದ್ದಾರೆ.

ನಾವು ಎಲ್ಲವನ್ನೂ ನೋಡಿದ್ದೇವೆ, ವೈಯಕ್ತಿಕ ಕಾನೂನುಗಳನ್ನು ಅಧ್ಯಯನ ಮಾಡಿದ್ದೇವೆ. ನಾವು ಕಾನೂನು ಆಯೋಗದ ವರದಿಯನ್ನು ಸಹ ಅಧ್ಯಯನ ಮಾಡಿದ್ದೇವೆ. ನೀವು ನಮ್ಮ ಕರಡನ್ನು ಓದಿದರೆ ಸಮಿತಿಯು ಎಲ್ಲವನ್ನೂ ಪರಿಗಣಿಸಿದೆ ಎಂದು ನಿಮಗೆ ಅನಿಸುತ್ತದೆ ಎಂದು ಅವರು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!