ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಸ್ಲಿಂ ಚಿಂತಕರ ಚಾವಡಿ ಕೇಂದ್ರ ಮಂಡಳಿ ನಿಯೋಗ ಇಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ವಿವಿಧ ಬೇಡಿಕೆ ಒಳಗೊಂಡ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಸಿಎಂ , ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನಾರಂಭಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಐದು ಗ್ಯಾರಂಟಿಗಳನ್ನು ಸರ್ಕಾರದಿಂದ ಅನುಷ್ಠಾನಕ್ಕೆ ತರಲಾಗುತ್ತಿದೆ. ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನೀಡಲಾಗುತ್ತದೆ. ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.
ವಸತಿ ಶಾಲೆ ಮತ್ತು ಜಿಲ್ಲೆಗೊಂದು ಅಲ್ಪಸಂಖ್ಯಾತ ಪಾಲಿಟೆಕ್ನಿಕ್ ಸ್ಥಾಪನೆಗೆ ನಿಯೋಗದಿಂದ ಮನವಿ ಮಾಡಲಾಗಿದ್ದು, ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.