ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಶೀಘ್ರದಲ್ಲೇ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸುವುದಾಗಿ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಂತ್ರಿ ಧಾಮಿ, ‘ರಾಜ್ಯದ ಜನರಿಗೆ ಕೊಟ್ಟ ಭರವಸೆಯಂತೆ ಏಕರೂಪ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲು ರಚಿಸಲಾಗಿದ್ದ ಸಮಿತಿಯು ತನ್ನ ಕೆಲಸವನ್ನು ಇಂದು (ಜೂ.30) ಪೂರ್ಣಗೊಳಿಸಿದೆ’ ಎಂದು ಹೇಳಿದ್ದಾರೆ.
ಈ ಮೂಲಕ ಶೀಘ್ರವೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದರು.
ಕರಡು ಪ್ರತಿಯನ್ನು ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕರಡು ಸಮಿತಿಯ ಮುಖ್ಯಸ್ಥ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ತಿಳಿಸಿದ್ದಾರೆ.