ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಬುಲ್ದಾನದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, 26 ಜನ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಧನ ಘೋಷಣೆ ಮಾಲಾಗಿದೆ.
ರಾಜ್ಯ ಸರ್ಕಾರವೂ ಪರಿಹಾರ ಘೋಷಣೆ ಮಾಡಿದೆ, ದೇವರಲ್ಲಿ ಪ್ರಾರ್ಥನೆ ಮಾಡುವೆ, ಮೃತರ ಕುಟುಂಬಗಳಿಗೆ ದುಃಖ ತಡೆದುಕೊಳ್ಳುವ ಶಕ್ತಿಯನ್ನು ನೀಡಲಿ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದಿದ್ದಾರೆ. ಬೆಳಗ್ಗೆ ಮಹಾರಾಷ್ಟ್ರದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಬೆಂಕಿ ಹೊತ್ತಿ 26ಮಂದಿ ಮೃತಪಟ್ಟಿದ್ದಾರೆ.