ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಂಡೀಷನ್ಗಳನ್ನು ಕೈಬಿಟ್ಟು ಗ್ಯಾರೆಂಟಿಗಳನ್ನು ಜಾರಿ ಮಾಡದಿದ್ದರೆ ಹೋರಾಟ ಖಂಡಿತ, ಈ ಬಗ್ಗೆ ರಾಜ್ಯಾಧ್ಯಕ್ಷರಾದ ನಳಿನ್ಕುಮಾರ್ ಅವರ ನೇತೃತ್ವದಲ್ಲಿ ಇದೇ 3ರಂದು ಸಂಜೆ ರಾಜ್ಯದ ಪದಾಧಿಕಾರಿಗಳು, ಶಾಸಕರು ಸೇರಿದಂತೆ ಮುಖಂಡರ ಸಭೆ ಕರೆಯಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ.
4ನೇ ತಾರೀಕಿನ ಹೋರಾಟದ ಬಗ್ಗೆ ಸಭೆ ಚರ್ಚಿಸಲಿದೆ. ಕಂಡಿಷನ್ ಕೈಬಿಟ್ಟು ಗ್ಯಾರಂಟಿ ಅನುಷ್ಠಾನಕ್ಕೆ ತರಲು ಆಗ್ರಹಿಸಿ 4ರಂದು ಹೋರಾಟ ನಡೆಯಲಿದೆ ಎಂದಿದ್ದಾರೆ.
ಕೇಂದ್ರದ ಬಿಜೆಪಿ ಸರಕಾರಕ್ಕೆ 9 ವರ್ಷ ತುಂಬುವ ಹಿನ್ನೆಲೆಯಲ್ಲಿ ನಮ್ಮ ಕಾರ್ಯವೈಖರಿ, ಬಿಬಿಎಂಪಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಲೋಕಸಭೆ ಚುನಾವಣೆ ಚುನಾವಣೆಯಲ್ಲಿ ನಮ್ಮ ಕಾರ್ಯತಂತ್ರದ ಕುರಿತು 3ರ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿಸಿದರು. ಪಕ್ಷದೊಳಗಿನ ವಿಚಾರಗಳನ್ನು ಪಕ್ಷದಲ್ಲೇ ಚರ್ಚಿಸಲು ಸೂಚಿಸಿದ್ದು, ಅದನ್ನು ಮುಖಂಡರು ಒಪ್ಪಿಕೊಂಡಿದ್ದಾರೆ ಎಂದರು.