ಹೊಸದಿಗಂತ ಡಿಜಿಟಲ್ ಡೆಸ್ಕ್:
ಅನ್ನಭಾಗ್ಯ ಯೋಜನೆ ಇಂದಿನಿಂದ ಆರಂಭವಾಗಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿಯೊಂದನ್ನು ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯ ಹಣವನ್ನು ಜು.1ರಂದು ಕೊಡುತ್ತೀವಿ ಎಂದು ಎಲ್ಲಿಯೂ ಹೇಳಿಲ್ಲ. ಜು.10ರಂದು ಹಣವನ್ನು ನೀಡಲು ಆರಂಭಿಸುತ್ತೇವೆ ಎಂದು ಸಿಎಂ ಹೇಳಿದ್ದಾರೆ.
ಗೃಹಜ್ಯೋತಿ ಯೋಜನೆ ಬಗ್ಗೆ ಯಾವುದೇ ಗೊಂದಲಗಳಿಲ್ಲ, ಎಲ್ಲರೂ ಆದಷ್ಟು ಬೇಗ ಅರ್ಜಿ ಸಲ್ಲಿಸಿ ಉಚಿತ ವಿದ್ಯುತ್ ಪಡೆಯಿರಿ ಎಂದಿದ್ದಾರೆ. ಅನ್ನಭಾಗ್ಯದ ಹಣ ಇಂದೇ ಖಾತೆಗೆ ಬಂದು ಬೀಳುತ್ತದೆ ಎನ್ನುವ ವಿಷಯದ ಬಗ್ಗೆ ಸಿಎಂ ಸ್ಪಷ್ಟನೆ ನೀಡಿದ್ದು, 10ನೇ ತಾರೀಖಿನ ನಂತರ ಖಾತೆಗೆ ಹಣ ವರ್ಗಾವಣೆ ಆಗಲಿದೆ ಎಂದಿದ್ದಾರೆ.