ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್ ಅಧಿವೇಶನ ಜುಲೈ 3 ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆ ವಿಧಾನಸೌಧದ ಸುತ್ತಾಮುತ್ತಾ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.
ಜುಲೈ 3 ರಿಂದ ಜುಲೈ 14 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದ್ದು, ಈ ಹಿನ್ನೆಲೆ ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ವಿಧಾನಸೌಧದ ಸುತ್ತಾಮುತ್ತಾ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ಈ ವೇಳೆ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದು, ಮೆರವಣಿಗೆ ಹಾಗೂ ಸಭೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ಶಸ್ತ್ರಾಸ್ತ್ರ ಹಾಗೂ ಸ್ಪೋಟಕ ವಸ್ತುಗಳ ಸಾಗಾಟ , ಶೇಖರಣೆ ನಿಷೇಧಿಸಲಾಗಿದೆ. ಒಂದು ವೇಳೆ ಆದೇಶ ಮೀರಿ ಕಾನೂನು ಉಲ್ಲಂಘಿಸಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅಧಿವೇಶನ ವಾಗಿದ್ದು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಡಲಿದ್ದಾರೆ. ಜುಲೈ 7ರಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ.