ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ನಾಲ್ವರು ವಿದ್ಯಾರ್ಥಿಗಳು (students) ಅಸ್ವಸ್ಥರಾಗಿರುವಂತಹ ಘಟನೆ ರಾಯಚೂರಿನ ತಾಲೂಕಿನ ಅಪ್ಪನದೊಡ್ಡಿ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ನಾಲ್ವರು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕೂಡಲೇ ವೈದ್ಯರನ್ನು ಶಾಲೆಗೆ ಕರೆಯಿಸಿ ಚಿಕಿತ್ಸೆ ನೀಡಲಾಗಿದೆ.
ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆ ಆವರಣದಲ್ಲಿ ಪೋಷಕರು ಜಮಾಯಿಸಿದ್ದು,ಶಿಕ್ಷಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಯಾಪಲದಿನ್ನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.