ಹೊಸದಿಗಂತ ವರದಿ, ಮಡಿಕೇರಿ:
ಮೈಸೂರಿನ ಬಿಳಿಕೆರೆ ಬಳಿ ಕೆ.ಎಸ್.ಆರ್.ಟಿ.ಸಿ.ಬಸ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕೊಡಗಿನ ದಂಪತಿ ಸಾವಿಗೀಡಾದ ಬಗ್ಗೆ ವರದಿಯಾಗಿದೆ.
ಮೃತರನ್ನು ಸೋಮವಾರಪೇಟೆ ತಾಲೂಕಿನ ಹಿರಿಕರ ಗ್ರಾಮದ ನಿವಾಸಿ, ಮರಗೋಡು ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಹೆಚ್.ಬಿ.ಬೆಳ್ಳಿಯಪ್ಪ ಹಾಗೂ ಅವರ ಪತ್ನಿ ವೀಣಾ ಎಂದು ಗುರುತಿಸಲಾಗಿದೆ.
ಶನಿವಾರ ಮಧ್ಯಾಹ್ನ ತಮ್ಮ ಕಾರಿನಲ್ಲಿ ಮೈಸೂರಿಗೆ ತೆರಳುತ್ತಿದ್ದಾಗ, ಬಿಳಿಕೆರೆ ಬಳಿಯ ರಂಗಯ್ಯನಕೊಪ್ಪಲುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಮತ್ತು ಇವರ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಈ ಸಂದರ್ಭ ಹೆಚ್.ಬಿ.ಬೆಳ್ಳಿಯಪ್ಪ ಸ್ಥಳದಲ್ಲೇ ಸಾವಿಗೀಡಾದರೆ, ಅವರ ಪತ್ನಿ ವೀಣಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭ ಮಾರ್ಗ ಮಧ್ಯೆ ಸಾವಿಗೀಡಾಗಿದ್ದಾರೆ.
ಭೀಕರ ಅಪಘಾತದಲ್ಲಿ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.