ಸಮ್ಮತಿಯ ಸೆಕ್ಸ್​ ವಯಸ್ಸಿನ ಮಿತಿ 1 8ರಿಂದ 16ಕ್ಕೆ ಇಳಿಸಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಸಲಹೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುರುಷ ಮತ್ತು ಸ್ತ್ರೀಯ ನಡುವಣ ಸಹಮತದ ದೈಹಿಕ ಸಂಬಂಧದ ವಯಸ್ಸನ್ನು 18 ವರ್ಷದಿಂದ 16 ವರ್ಷಕ್ಕೆ ಇಳಿಸುವಂತೆ ಮಧ್ಯಪ್ರದೇಶ ಹೈಕೋರ್ಟ್‌ (Madhya Pradesh High Court) ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.

2020ರ ಜುಲೈ 17ರಂದು ವರದಿಯಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಚಂದೇಲ್ ಜಾದವ್ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ವಿಚಾರಣೆಯ ಸಂದರ್ಭ ನ್ಯಾಯಮೂರ್ತಿ ದೀಪಕ್ ಕುಮಾರ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮ ಜಾಗೃತಿ ಮತ್ತು ಸುಲಭವಾಗಿ ಪ್ರವೇಶಿಸಬಹುದಾದ ಇಂಟರ್ನೆಟ್ ಸಂಪರ್ಕದಿಂದಾಗಿ 14 ವರ್ಷ ವಯಸ್ಸಿನ ಪ್ರತಿಯೊಬ್ಬ ಹುಡುಗ ಅಥವಾ ಹುಡುಗಿ ಚಿಕ್ಕ ವಯಸ್ಸಿನಲ್ಲಿಯೇ ಲೈಂಗಿಕತೆಯ ಕುರಿತಾದ ಅರಿವು ಹೆಚ್ಚಾಗುತ್ತಿದೆ ಎಂದು ನ್ಯಾಯಾಧೀಶರು ಅಭಿಪ್ರಾಯಪಟ್ಟಿದ್ದಾರೆ.

ಸಾಮಾಜಿಕ ಮಾಧ್ಯಮಗಳು, ಇಂಟರ್ನೆಟ್ ಪ್ರಭಾವದಿಂದಾಗಿ ಹೆಣ್ಣು ಮತ್ತು ಗಂಡು ಮಕ್ಕಳು ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಈ ಆಕರ್ಷಣೆಗಳು ಒಪ್ಪಿಗೆಯೊಂದಿಗೆ ದೈಹಿಕ ಸಂಬಂಧ ಹೊಂದಲು ಕಾರಣವಾಗುತ್ತಿದೆ. ಇಂಥ ಪ್ರಕರಣಗಳಲ್ಲಿ, ಪುರುಷರನ್ನು ಅಪರಾಧಿಗಳು ಎನ್ನಲಾಗದು. ಅವರು ಹೆಣ್ಣಿನ ಸಂಪರ್ಕಕ್ಕೆ ಬಂದಾಗ ವಯಸ್ಸಿನ ವಿಷಯದಿಂದ ದೈಹಿಕ ಸಂಬಂಧಗಳನ್ನು ಬೆಳೆಸಿಕೊಳ್ಳುವಂತಾಗುತ್ತದೆ. ಈ ಕಾರಣಕ್ಕಾಗಿಯೇ, ಭಾರತೀಯ ದಂಡಸಂಹಿತೆಯಲ್ಲಿ, 16 ವರ್ಷಗಳ ವಯಸ್ಸಿನ ಮಿತಿಯನ್ನು ನಿಗದಿ ಮಾಡಲಾಗಿತ್ತು ಎಂದು ಪೀಠ ಹೇಳಿದೆ.

ಹೆಣ್ಣು ಮಕ್ಕಳ ಸಮ್ಮತಿ ಸೆಕ್ಸ್ ವಯೋಮಿತಿಯನ್ನು 18 ವರ್ಷಕ್ಕೆ ಏರಿಸಿರುವುದು ಸಮಾಜದ ರಚನೆಗೆ ಕುಂದುಂಟು ಮಾಡುತ್ತಿದೆ ಎಂದು ನ್ಯಾಯಾಲಯ ಹೇಳಿದೆ. ಹದಿಹರೆಯದ ವಯಸ್ಸಿನಲ್ಲೇ ಯುವ ಜನತೆ ದೈಹಿಕ ಸಂಬಂಧಗಳನ್ನು ಬೆಳೆಸುತ್ತಾರೆ. ಆದರೆ, ಇದರಿಂದಾಗಿ ಸಮಾಜದಲ್ಲಿ ಹುಡುಗನನ್ನು ಅಪರಾಧಿಯಂತೆ ನೋಡಲಾಗುತ್ತದೆ. ಇಂದು, ಹೆಚ್ಚಿನ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ.ಕಾನೂನು ವೈಪರೀತ್ಯದಿಂದ ಹದಿಹರೆಯದ ಹುಡುಗರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಮೊದಲಿನಂತೆಯೇ ಸಮ್ಮತಿಯ ವಯಸ್ಸನ್ನು 18 ರಿಂದ 16 ವರ್ಷಕ್ಕೆ ಇಳಿಸುವ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅನ್ಯಾಯವನ್ನು ಸರಿಪಡಿಸಲು ತಿದ್ದುಪಡಿಗಳನ್ನು ಮಾಡಬೇಕು ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!