ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರ, ಗೋವಾ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ ಮತ್ತು ಇತರ ಹಲವು ರಾಜ್ಯಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವುದಾಗಿ ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಪೂರ್ವ ಯುಪಿಯಲ್ಲಿ ಭಾರೀ ಮಳೆಯ ತೀವ್ರತೆಯು ನಾಳೆಯಿಂದ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಒತ್ತಿ ಹೇಳಿದೆ.
ಪಶ್ಚಿಮ ಭಾರತ: ಜುನಾಗಢ್, ಅಮ್ರೇಲಿ, ನವಸಾರಿ, ಡ್ಯಾಂಗ್ಸ್ ಮತ್ತು ವಲ್ಸಾದ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವುದಾಗಿ ತಿಳಿಸಿದೆ. ಜುಲೈ 5ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಪೂರ್ವ ಮತ್ತು ಈಶಾನ್ಯ ಭಾರತ: ಮುಂದಿನ ಐದು ದಿನಗಳಲ್ಲಿ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಬಿಹಾರ, ಅಸ್ಸಾಂ ಪ್ರದೇಶಗಳಲ್ಲಿ ತಕ್ಕಮಟ್ಟಿಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಭಾರತ: ಕರಾವಳಿ ರಾಜ್ಯವು ತುಂತುರು ಮಳೆಯನ್ನು ಮುಂದುವರೆಸುತ್ತಿರುವುದರಿಂದ ಜುಲೈ 4 ರವರೆಗೆ ಗೋವಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಕರಾವಳಿಯುದ್ದಕ್ಕೂ 65 ಕಿಮೀ ವೇಗದಲ್ಲಿ ಗಾಳಿ ವೇಗ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಐಎಂಡಿ ಸೂಚಿಸಿದೆ.