ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.
ಮದ್ದೂರಮ್ಮ ದೇವಾಲಯದ ಹಿಂಭಾಗದ ಹಳ್ಳದಲ್ಲಿ ಈ ದುರಂತ ಸಂಭವಿಸಿದೆ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಇಬ್ಬರು ಬಾಲಕರು ಹಳ್ಳದಲ್ಲಿ ಈಜಲು ನೀರಿಗಿಳಿದಿದ್ದಾರೆ. ಈ ವೇಳೆ ದುರಂತ ಸಂಭವಿಸಿದೆ.
ಮೃತ ಬಾಲಕರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ.