February 8, 2026
Sunday, February 8, 2026
spot_img

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ನಿವಾಸದ ಮೇಲೆ ಐಟಿ ದಾಳಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರ ಹೊಟೇಲ್ ಬೆಸ್ಟಿಯನ್ ಗಾರ್ಡನ್ ಸಿಟಿಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ಮುಂಬೈ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಈ ಹಿಂದೆ, ನಟಿಯ ಆತಿಥ್ಯ ವ್ಯವಹಾರಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿಯೂ ಶೋಧ ನಡೆಸಲಾಗಿತ್ತು.

ಶಿಲ್ಪಾ ಶೆಟ್ಟಿ ಸಹ-ಮಾಲೀಕತ್ವದ ಬಾಸ್ಟಿಯನ್ ಗಾರ್ಡನ್ ಸಿಟಿ ಸೇರಿದಂತೆ ಎರಡು ಪಬ್ಗಳ ವಿರುದ್ಧ ಬೆಂಗಳೂರು ಪೊಲೀಸರು ಅನುಮತಿ ಪಡೆದ ಸಮಯವನ್ನು ಮೀರಿ ಕಾರ್ಯನಿರ್ವಹಿಸಿದ ಆರೋಪದ ಮೇಲೆ ಪ್ರಕರಣಗಳನ್ನು ದಾಖಲಿಸಿದ ಒಂದು ದಿನದ ನಂತರ ಕ್ರಮ ಕೈಗೊಳ್ಳಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !