ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಕೆ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪೈಲಟ್‌ನ ಸಮಯಪ್ರಜ್ಞೆಯಿಂದಾಗಿ ಅನಾಹುತವೊಂದು ತಪ್ಪಿದೆ.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆ ಘಾಟಘೆ ಗ್ರಾಮದ ಬಳಿ ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದ ಕೆಕೆ ಎಕ್ಸ್‌ಪ್ರೆಸ್ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಘಟನೆಯಲ್ಲಿ ಲೋಕೋ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ ಸೋಲಾಪುರದಿಂದ ಪುಣೆ ಮಾರ್ಗವಾಗಿ ದೆಹಲಿಗೆ ಹೊರಟಿದ್ದ ವಿದ್ಯುತ್ ಚಾಲಿತ ಕೆಕೆ ಎಕ್ಸ್‌ಪ್ರೆಸ್ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ರೇಲ್ವೇ ಇಂಜಿನ್ ನಿಂದ ಹೊರ ಬಂದ ದಟ್ಟ ಹೊಗೆಯನ್ನು ನೋಡಿ ಪ್ರಯಾಣಿಕರು ಆತಂಕಗೊಂಡಿದ್ದರು. ತಕ್ಷಣ ರೈಲ್ವೆ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.
ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಬ್ಬಂದಿ ಬೆಂಕಿ ನಂದಿಸಿದ ಬಳಿಕ ಕೆಕೆ ಎಕ್ಸ್‌ಪ್ರೆಸ್ ರೈಲು ಸಂಚಾರ ನಡೆಸಿದೆ.