ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರಕಾರ ಮುಂಬರುವ ಮುಂಗಾರು ಅಧಿವೇಶನದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಮಂಡಿಸಲು ಸಜ್ಜಾಗುತ್ತಿದ್ದು, ಈ ನಡುವೆ ಸದ್ಯಕ್ಕೆ ಇಂಥ ಮಸೂದೆ ಅನಪೇಕ್ಷಿತ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.
ಸಂಸತ್ ಅಧಿವೇಶನದ ಕಾರ್ಯತಂತ್ರಗಳ ಬಗ್ಗೆ ಸಮಾಲೋಚಿಸಲು ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಪಕ್ಷದ ಹಿರಿಯ ನಾಯಕ ಜೈರಾಂ ರಮೇಶ್, ಏಕರೂಪ ನಾಗರಿಕ ಸಂಹಿತೆ ವಿಷಯದಲ್ಲಿ ಜೂನ್ 15ರಂದು ವ್ಯಕ್ತಪಡಿಸಿದ್ದ ಅಭಿಪ್ರಾಯಕ್ಕೆ ನಾವು ಬದ್ಧ. ಅದಕ್ಕೆ ಹೊಸದಾಗಿ ಸೇರಿಸಲೂ ಏನೂ ಇಲ್ಲ. ಸಂಹಿತೆ ಕುರಿತ ಕರಡು ವರದಿ ತಯಾರಾಗಿ, ಅದರ ಬಗ್ಗೆ ಚರ್ಚೆ ಆರಂಭವಾದ ಬಳಿಕ ನಾವು ನಮ್ಮ ಅಭಿಪ್ರಾಯ ವ್ಯಕ್ತಪಡಿಸಲಿದ್ದೇವೆ’ ಎಂದು ಹೇಳಿದ್ದಾರೆ.