ನಾನು ಯಾಕೆ ಶಿವಸೇನೆ-ಬಿಜೆಪಿ ಜೊತೆ ಸೇರಿಕೊಂಡೆ ಅಂದರೆ…: ಅಜಿತ್‌ ಪವಾರ್‌ ನೀಡಿದ್ರು ಉತ್ತರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಹಾರಾಷ್ಟ್ರ ರಾಜಕೀಯದಲ್ಲಿ ಈಗ ಬಿರುಗಾಳಿ ಎದ್ದಿದ್ದು, ಅದಕ್ಕೆ ಕಾರಣ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌.

ಶಿವಸೇನೆ ಹಾಗೂ ಬಿಜೆಪಿ ನೇತೃತ್ವದ ಸರ್ಕಾರದ ಜತೆ ಕೈಜೋಡಿಸಿದ ಅಜಿತ್‌ ಪವಾರ್‌ ಡಿಸಿಎಂ ಆಗಿ, ಒಂಬತ್ತು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಳಿಕ ಮಾತನಾಡಿದ ಅಜಿತ್ ,’ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉಚ್ಛ್ರಾಯ ಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಸಾಕಷ್ಟು ಅಭಿವೃದ್ಧಿ ಮಾಡುತ್ತಿದ್ದಾರೆ ಎಂಬುದರಲ್ಲಿ ಎರಡು ಮಾತಿಲ್ಲ. ಎನ್‌ಸಿಪಿಯು ಶಿವಸೇನೆ ಜತೆ ಮೈತ್ರಿ ಮಾಡಿಕೊಳ್ಳಬಹುದು ಎಂದಾದರೆ, ಎನ್‌ಸಿಪಿ ಏಕೆ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಬಾರದು? ರಾಜ್ಯದ ಅಭಿವೃದ್ಧಿಯೊಂದನ್ನೇ ಗಮನದಲ್ಲಿಟ್ಟುಕೊಂಡು ಶಿವಸೇನೆ-ಬಿಜೆಪಿ ಸರ್ಕಾರ ಸೇರಿದ್ದೇನೆ’ ಎಂದು ತಿಳಿಸಿದರು.

ಎನ್‌ಸಿಪಿಯಲ್ಲಿ ಯಾವುದೇ ಒಡಕು ಇಲ್ಲ, ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಎನ್ಸಿಪಿ ಹೆಸರು ಮತ್ತು ಚಿಹ್ನೆಯ ಮೇಲೆ ಸ್ಪರ್ಧಿಸುತ್ತೇವೆ. ಪಕ್ಷದ ಎಲ್ಲಾ ಚುನಾಯಿತ ಪ್ರತಿನಿಧಿಗಳು ಸರ್ಕಾರ ಸೇರುವ ನಿರ್ಧಾರವನ್ನು ಬೆಂಬಲಿಸಿದ್ದಾರೆ ಎಂದು ಅವರು ತಿಳಿಸಿದರು.

ಒಂದೆರಡು ದಿನಗಳಲ್ಲಿ ಸಂಪುಟ ಖಾತೆಗಳನ್ನು ಪ್ರಕಟಿಸಲಾಗುವುದು, ಅದರಲ್ಲಿ ನಾವು ಕೆಲಸವನ್ನು ಪ್ರಾರಂಭಿಸುತ್ತೇವೆ ಎಂದು ಪವಾರ್ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!