ಹೊಸದಿಗಂತ ವರದಿ,ಕಲಬುರಗಿ:
ವಿಧಾನಸಭೆ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ಕಕ ಭಾಗಕ್ಕೆ ನೀಡಲು ಒತ್ತಾಯ
ವಿಧಾನ ಸಭೆ ಮತ್ತು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನಗಳಿಗೆ ಹಾಗೂ ಇತರ ಸ್ಥಾನಗಳ ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ಗೆ ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿ ಅವರು ಒತ್ತಾಯಿಸಿದ್ದಾರೆ.
ಕುರಿತು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡ್ಡಿಯೂರಪ್ಪ ನವರನ್ನು ಶಶಿಲ್ ನಮೋಶಿ ಅವರು ಭೇಟಿಯಾಗಿ ಮನವಿ ಮಾಡಿದ್ದಾರೆ.
ಕಲ್ಯಾಣ ಕರ್ನಾಟಕಕ್ಕೆ ಇಲ್ಲಿಯವರೆಗೂ ಸಭಾಪತಿ, ಉಪ-ಸಭಾಪತಿ, ವಿರೋಧ ಪಕ್ಷದ ನಾಯಕ, ಸರ್ಕಾರಿ ಮುಖ್ಯ ಸಚೇತಕ ಹಾಗೂ ವಿರೋಧ ಪಕ್ಷದ ಮುಖ್ಯ ಸಚೇತಕ ಹುದ್ದೆಯನ್ನಾಗಲಿ ಯಾರೊಬ್ಬರಿಗೂ ನೀಡಿರುವುದಿಲ್ಲ. ಹೀಗಾಗಿ ಈ ಬಾರಿ ಕಲ್ಯಾಣ ಕರ್ನಾಟಕ ಭಾಗಕ್ಕೆ ಆದ್ಯತೆ ನೀಡಬೇಕು ಎಂದು ವಿನಂತಿಸಿದ್ದಾರೆ.
ನಾನು 4ನೇ ಬಾರಿಗೆ ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಯಾಗಿ ಕೆಲಸ ಮಾಡುತ್ತಿದ್ದೇನೆ.
ನನನ್ನು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ನೇಮಕ ಮಾಡಲು ಮನವಿ ಮಾಡಿದ್ದೇನೆ ಎಂದು ಶಶಿಲ್ ನಮೋಶಿ ಹೇಳಿದ್ದಾರೆ.