ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದಲ್ಲಿ ರಾಜಕೀಯ ಬಿರುಗಾಳಿ ಬೀಸಿದ್ದು, ಸಿಎಂ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರಕ್ಕೆ ಅಜಿತ್ ಪವಾರ್ ಬೆಂಬಲ ಸೂಚಿಸಿದ್ದು, ನೂತನ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದರಿಂದ ಬೇಸರಗೊಂಡ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದು, ‘ಅಜಿತ್ ಪವಾರ್ ಬಂಡಾಯದಿಂದ ಪ್ರಧಾನಿ ಮೋದಿಗೆ ಸಂತೋಷವಾಗಿದೆ’ ಎಂದು ಕಿಡಿಕಾರಿದ್ದಾರೆ.
ನಾನು ಮತ್ತೆ ಪಕ್ಷವನ್ನು ಕಟ್ಟುತ್ತೇನೆ . ನನಗೆ ಮಹಾರಾಷ್ಟ್ರದ ಯುವಕರ ಮೇಲೆ ನಂಬಿಕೆ ಇದೆ. ನಾನು ಮಹಾರಾಷ್ಟ್ರದ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದೇನೆ. ನಾವು ಅನೇಕ ಬಾರಿ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿದ್ದೇವೆ. ದೇಶದ ಅನೇಕ ರಾಜ್ಯಗಳಿಂದ ನನಗೆ ಕರೆಗಳು ಬಂದಿವೆ. ಎಲ್ಲರೂ ನನ್ನನ್ನು ಬೆಂಬಲಿಸಿದ್ದಾರೆ. ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಂಗ್ರೆಸ್ ನಾಯಕರು ಕೂಡ ನನಗೆ ಕರೆ ಮಾಡಿದರು. ಎಲ್ಲರೂ ನನ್ನನ್ನು ಬೆಂಬಲಿಸಿದ್ದಾರೆ. ಈಗ ನಾನು ರಾಜ್ಯ ಮತ್ತು ದೇಶದಲ್ಲಿ ಪ್ರವಾಸ ಮಾಡುತ್ತೇನೆ ಮತ್ತು ಪಕ್ಷದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ. ನನ್ನ ಪಕ್ಷದ ಕಾರ್ಯಕರ್ತರ ಮೇಲೆ ನನಗೆ ನಂಬಿಕೆ ಇದೆ ಎಂದರು.