ಆ್ಯಶಸ್ ಸರಣಿ: ಇಂಗ್ಲೆಂಡ್ ವಿರುದ್ದ 43 ರನ್​ಗಳ ಭರ್ಜರಿ ಜಯ ದಾಖಲಿಸಿದ ಆಸ್ಟ್ರೇಲಿಯಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಆ್ಯಶಸ್ ಸರಣಿಯ (Ashes Series 2023) 2ನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ (England) ವಿರುದ್ಧ ಆಸ್ಟ್ರೇಲಿಯಾ (Australia) ಜಯಭೇರಿ ಬಾರಿಸಿದೆ.

ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಆಸ್ಟ್ರೇಲಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದೆ .

ಕ್ರಿಕೆಟ್ ಕಾಶಿ ಲಾರ್ಡ್ಸ್ (Lords)​ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ (66) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಸ್ಟೀವ್​ ಸ್ಮಿತ್ (110) ಶತಕ ಬಾರಿಸಿದರೆ, ಟ್ರಾವಿಸ್ ಹೆಡ್ (77) ಬಿರುಸಿನ ಅರ್ಧಶತಕ ಸಿಡಿಸಿದ್ದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡವು 416 ರನ್​ ಕಲೆಹಾಕಿ ಆಲೌಟ್ ಆಯಿತು.

ಆ ಬಳಿಕ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಬೆನ್ ಡಕೆಟ್ 98 ರನ್​ ಬಾರಿಸಿದರೆ, ಹ್ಯಾರಿ ಬ್ರೂಕ್ (50) ಅರ್ಧಶತಕ ಸಿಡಿಸಿದರು. ಪರಿಣಾಮ 325 ರನ್​ಗಳಿಗೆ ಇಂಗ್ಲೆಂಡ್ ಸರ್ವಪತನ ಕಂಡಿತು.

ಮೊದಲ ಇನಿಂಗ್ಸ್​ನಲ್ಲಿನ 91 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಆಸ್ಟ್ರೇಲಿಯಾ 279 ರನ್​ಗಳಿಗೆ ಆಲೌಟ್ ಆಯಿತು.

ಹೀಗಾಗಿ 371 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ ಪರ ಬೆನ್ ಡಕೆಟ್ (83) ಆಕರ್ಷಕ ಅರ್ಧಶತಕ ಬಾರಿಸಿದರು. ಆದರೆ ಉಳಿದ ಬ್ಯಾಟರ್​ಗಳು ಕ್ರೀಸ್ ಕಚ್ಚಿ ನಿಲ್ಲುವಲ್ಲಿ ವಿಫಲರಾದರು. ಪರಿಣಾಮ 193 ರನ್​ಗಳಿಸುವಷ್ಟರಲ್ಲಿ ಇಂಗ್ಲೆಂಡ್ ತಂಡವು ಪ್ರಮುಖ 6 ವಿಕೆಟ್ ಕಳೆದುಕೊಂಡಿತು.

ಬಿರುಸಿನ ಬ್ಯಾಟಿಂಗ್​ ನೆರವಿನಿಂದ ಸ್ಟೋಕ್ಸ್ ಕೇವಲ 142 ಎಸೆತಗಳಲ್ಲಿ ಶತಕ ಪೂರೈಸಿದರು. ಇನ್ನು ಭರ್ಜರಿ ಸೆಂಚುರಿ ಬಳಿಕ ಕೂಡ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ ಸ್ಟೋಕ್ಸ್ ಇಂಗ್ಲೆಂಡ್ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದರು. ಆದರೆ ಗೆಲ್ಲಲು ಕೇವಲ 70 ರನ್​ಗಳ ಅವಶ್ಯಕತೆಯಿರುವಾಗ ಬಿರುಸಿನ ಹೊಡೆತಕ್ಕೆ ಮುಂದಾಗಿ ಹ್ಯಾಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

ಇದರೊಂದಿಗೆ 214 ಎಸೆತಗಳಲ್ಲಿ 9 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ನೊಂದಿಗೆ 155 ರನ್ ಬಾರಿಸಿದ ಬೆನ್ ಸ್ಟೋಕ್ಸ್ ಅವರ ಇನಿಂಗ್ಸ್ ಅಂತ್ಯವಾಯಿತು. ಇದರ ಬೆನ್ನಲ್ಲೇ ಒಲ್ಲಿ ರಾಬಿನ್ಸನ್ (1) ಹಾಗೂ ಸ್ಟುವರ್ಟ್ ಬ್ರಾಡ್ (11) ಕೂಡ ವಿಕೆಟ್ ಒಪ್ಪಿಸಿದರು. ಅಂತಿಮವಾಗಿ ಜೋಶ್ ಟಂಗ್ (19) ಮಿಚೆಲ್ ಸ್ಟಾರ್ಕ್​ ಎಸೆತದಲ್ಲಿ ಬೌಲ್ಡ್ ಆಗುವುದರೊಂದಿಗೆ ಇಂಗ್ಲೆಂಡ್ ತಂಡ 327 ರನ್​ಗಳಿಗೆ ದ್ವಿತೀಯ ಇನಿಂಗ್ಸ್ ಅಂತ್ಯಗೊಳಿಸಿತು. ಈ ಮೂಲಕ ಆಸ್ಟ್ರೇಲಿಯಾ ತಂಡವು 43 ರನ್​ಗಳ ಭರ್ಜರಿ ಜಯ ತನ್ನದಾಗಿಸಿಕೊಂಡಿದೆ.
ದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!