ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದಿನಿಂದ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಇದೇ ಮೊದಲ ಬಾರಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಭಾಷಣ ಮಾಡಲಿದ್ದಾರೆ.
ಇಂದಿನಿಂದ ಜು.14 ರವರೆಗೂ ವಿಧಾನಮಂಡಲ ಅಧಿವೇಷನ ನಡೆಯಲಿದೆ. ಇಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಬಾರಿ ಅಧಿವೇಶನದಲ್ಲಿ ಯಾವೆಲ್ಲಾ ವಿಧೇಯಕಗಳು ಮಂಡನೆಯಾಗಲಿವೆ ಎನ್ನುವ ಮಾಹಿತಿ ಸ್ವಲ್ಪವೇ ಸಮಯದಲ್ಲಿ ತಿಳಿಯಲಿದೆ.
16ನೇ ವಿಧಾನಸಭೆಯ ಮೊದಲ ಅಧಿವೇಶನ ಇದಾಗಿದ್ದು, ಮುಖ್ಯವಾಗಿ ಐದು ಗ್ಯಾರೆಂಟಿಗಳ ಬಗ್ಗೆ ಚರ್ಚೆಯಾಗಲಿದೆ. ಇವುಗಳನ್ನು ಅನುಷ್ಠನಕ್ಕೆ ತರಯವ ಬಗೆಗಿನ ಮಾತುಕತೆ ನಡೆಯಲಿದೆ.
ಪ್ರತಿಪಕ್ಷಗಳು ಸಾಕಷ್ಟು ಸಿದ್ಧತೆ ನಡೆಸಿದ್ದು, ಕಾಂಗ್ರೆಸ್ ಕೂಡ ಪರಿಸ್ಥಿತಿಗೆ ಉತ್ತರಿಸುವ ಸಿದ್ಧತೆ ಮಾಡಿಕೊಂಡಿದೆ. ಜು.7ಕ್ಕೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಬೆನ್ನಲ್ಲೇ ಇಂದಿನಿಂದ ಅಧಿವೇಶನ ಮುಗಿಯುವವರೆಗೂ ಬಿಜೆಪಿ ಸದನದ ಒಳಗೆ ಹೊರಗೆ ಪ್ರತಿಭಟನೆಗೆ ಮುಂದಾಗಿದೆ.