ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಜಾರಿಗೆ ಬರೋದು ಯಾವಾಗ? ಅರ್ಜಿ ಸಲ್ಲಿಕೆಗೆ ದಿನಾಂಕ ಯಾವುದು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.
ಪ್ರತೀ ಮನೆಯ ಯಜಮಾನಿಗೆ ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಜು.14ರಿಂದ ಅರ್ಜಿ ಸಲ್ಲಿಸುವುದು ಬಹುತೇಕ ಖಚಿತವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇನ್ನೇನು ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಸಿಗಲಿದೆ, ಆಗಸ್ಟ್ ತಿಂಗಳಿನಿಂದ ಮನೆ ಯಜಮಾನಿ ಖಾತೆಗೆ ಎರಡು ಸಾವಿರ ರೂಪಾಯಿ ಹಾಕುತ್ತೇವೆ ಎಂದು ಹೇಳಿದ್ದಾರೆ.