ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಸ್ಸಾಂನ ಗುವಾಹಟಿಯ ಕಮ್ರೀಪ್ನಲ್ಲಿ ವ್ಯಕ್ತಿಯೊಬ್ಬ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ.
ಆಟೋ ಚಾಲಕ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ನದಿಗೆ ಎಸೆದಿದ್ದಾನೆ. ಮೊಬೈಲ್ಗೆ ಕರೆನ್ಸಿ ಹಾಕಿಸಿಕೊಂಡು ಬರುತ್ತೇನೆ ಎಂದು ಮನೆಯಿಂದ ಹೋದ ಮಗಳು ಮನೆಗೆ ಬಂದಿರಲಿಲ್ಲ.
ಹೆದರಿದ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ದಿಗರು ನದಿಯಲ್ಲಿ ಬಾಲಕಿ ಶವ ಪತ್ತೆಯಾಗಿದ್ದು, ಅತ್ಯಾಚಾರಿಯನ್ನು ಗಲ್ಲಿಗೇರಿಸಬೇಕು ಎಂದು ಪ್ರತಿಭಟನೆ ನಡೆಸಲಾಗುತ್ತಿದೆ.
ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದು, ತಾನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದೇನೆ ಎಂದು ಆತ ಒಪ್ಪಿಕೊಂಡಿದ್ದಾನೆ. ಹೆಚ್ಚಿನ ತನಿಖೆ ನಡೆಯುತ್ತಿದೆ.