ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಇನ್ನೂ ನಾಲ್ಕೈದು ದಿನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮುಂಗಾರು ಮಾರುತಗಳು ಪ್ರವೇಶಿಸಿದ್ದರೂ ನಿರೀಕ್ಷಿತ ಮಳೆ ಆಗಿರಲಿಲ್ಲ, ಆದರೆ ಇದೀಗ ಎರಡು ದಿನಗಳಿಂದ ಮಳೆ ಸುರಿಯುತ್ತಿದ್ದು, ಮಳೆ ಕ್ರಮೇಣ ಹೆಚ್ಚಾಗಲಿದೆ.
ಜುಲೈ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುವ ನಿರೀಕ್ಷೆ ಇದ್ದು, ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ.
ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಹಾವೇರಿ, ಹಾಸನ, ಬೆಳಗಾವಿ, ಧಾರವಾಡ ಹಾಗೂ ಮೈಸೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದೆ.