ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ 21 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.
ಬಿ.ಎಸ್ಸಿ (ಕೃಷಿ), ಸ್ನಾತಕೋತ್ತರ ಪದವಿ, ಪಿಹೆಚ್ಡಿ ಮತ್ತು 10ನೇ ತರಗತಿ ವಿದ್ಯಾರ್ಹತೆ ಜೊತೆಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 5,000/- ರಿಂದ 70,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.
ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 18,2023ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.