ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಮೋದಿಯಂತಹ ನಾಯಕ ಮತ್ತೊಬ್ಬರಿಲ್ಲ. ಅವರಿಗೆ ಪರ್ಯಾಯ ನಾಯಕ ಇಲ್ಲ ಎಂದು ಮಹಾರಾಷ್ಟ್ರ ನೂತನ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮಂಗಳವಾರ ಹೇಳಿದ್ದಾರೆ.
ದೇಶವು ಮೋದಿ ನಾಯಕತ್ವದಲ್ಲಿ ಮುನ್ನಡೆಯುತ್ತಿದೆ. ಅವರನ್ನು ಬೆಂಬಲಿಸಲು ನಾವು ಸರ್ಕಾರಕ್ಕೆ ಸೇರಿಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಖಾತೆ ಹಂಚಿಕೆ ಯಾವಾಗ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಲು ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ನಾಗ್ಪುರಕ್ಕೆ ತೆರಳಿರುವುದರಿಂದ ಖಾತೆ ಹಂಚಿಕೆ ವಿಳಂಬವಾಗುತ್ತಿದ್ದು, ಶೀಘ್ರದಲ್ಲೇ ಖಾತೆ ಹಂಚಿಕೆ ಮಾಡಲಾಗುವುದು ಎಂದು ಅಜಿತ್ ಪವಾರ್ ತಿಳಿಸಿದ್ದಾರೆ.