ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ಹಾಸ್ಟೆಲ್‌ನಲ್ಲಿ (Hostel) ಎಂಜಿನಿಯರಿಂಗ್ (Engineering) ವಿದ್ಯಾರ್ಥಿನಿ (Student) ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.
ಕೋಲಾರ (Kolar) ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಯಲ್ದೂರು ಗ್ರಾಮದ ಪ್ರೀತಿ(21) ಸಾವನ್ನಪ್ಪಿದ ವಿದ್ಯಾರ್ಥಿನಿ.
ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜುವೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಪ್ರೀತಿಮಂಗಳವಾರ ಕಾಲೇಜಿನ ವಸತಿನಿಲಯದ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಕಾಲೇಜು ಆಡಳಿತ ಮಂಡಳಿ ಸಿಬ್ಬಂದಿ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೇ ಅದಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆಯ ಕುರಿತು ಕಾಲೇಜು ಆಡಳಿತ ಮಂಡಳಿಯವರು, ವಿದ್ಯಾರ್ಥಿನಿಯ ಸಾವಿಗೆ ಕಾರಣ ತಿಳಿದುಬಂದಿಲ್ಲ ಎನ್ನುತ್ತಿದ್ದಾರೆ. ಇತ್ತ ಮೃತಳ ಪೋಷಕರು, ಏನಾಗಿದೆ ಎಂಬುದು ನಮಗೂ ಗೊತ್ತಿಲ್ಲ. ಕಾಲೇಜಿನವರು ನಿಮ್ಮ ಮಗಳಿಗೆ ತುಂಬಾ ಹುಷಾರಿಲ್ಲ ಬೇಗ ಬನ್ನಿ ಎಂದು ಹೇಳಿದರು. ನಾವು ಬಂದಾದ ಮೇಲೆ ಮೃತಪಟ್ಟಿದ್ದಾಳೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ.