ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಿಂದ ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಿಸುವ ಸಾಧ್ಯತೆ ಇದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆ ಕೇಂದ್ರ ನಾಯಕರು ಅಭಿಪ್ರಾಯ ಸಂಗ್ರಹಿಸಿದ್ದಾರೆ. ಇಂದು ಪ್ರಧಾನಿ ಮೋದಿ, ಅಮಿತ್ ಶಾ ಅವರ ಜತೆ ಜರ್ಚಿಸಿ ಅಂತಿಮ ನಿರ್ಧಾರಕ್ಕೆ ಬರಬಹುದು. ಹೀಗಾಗಿ ಇಂದೇ ವಿಪಕ್ಷ ನಾಯಕ, ರಾಜ್ಯಾಧ್ಯಕ್ಷರ ಹೆಸರು ಘೋಷಣೆಯಾಗಬಹುದು. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಅಲ್ಲದೆ ನಿನ್ನೆ ವಿಧಾನಸಭೆ ಕಲಾಪದ ವೇಳೆ ಬಿಜೆಪಿ ಮೊಂಡಾಟ ಬಿಡಲಿ ಎಂದು ಹೇಳಿಕೆ ನೀಡಿದ ಸಿಎಂ ಸಿದ್ಧರಾಮಯ್ಯ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಬಿಎಸ್ ಯಡಿಯೂರಪ್ಪ, ಗ್ಯಾರಂಟಿ ಜಾರಿ ಮಾಡದೇ ಬೇಜವಾಬ್ದಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದರು.