ಬೆಂಗಳೂರು ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರದಿಂದ ಬಿಗ್ ಪ್ಲ್ಯಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಾಜ್ಯ ಸರ್ಕಾರವು ಬಿಗ್‌ ಪ್ಲ್ಯಾನ್ ಮಾಡಿದ್ದು, ಬ್ರಾಂಡ್ ಬೆಂಗಳೂರು ಯೋಜನೆಯಡಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ನಗರದಲ್ಲಿ ಟ್ರಾಫಿಕ್ ಸಮಸ್ಯೆ ತಪ್ಪಿಸಲು 50 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಿಸಲು ಸರ್ಕಾರ ಚಿಂತನೆ ನಡೆಸಿದೆ.

ಎರಡು ಹಂತದಲ್ಲಿ ಸುರಂಗ ಮಾರ್ಗ ರಸ್ತೆ ನಿರ್ಮಿಸಲು ಪ್ಲ್ಯಾನ್ ನಡೆದಿದೆ. ಮೊದಲ ಹಂತದ ಯೋಜನೆಯಡಿ ಸುಮಾರು 22 ಸಾವಿರ ವೆಚ್ಚದಲ್ಲಿ 50 ಕಿ.ಮೀ ರಸ್ತೆ ನಿರ್ಮಾಣ ಮಾಡಿ ಸುರಂಗ ಮಾರ್ಗವನ್ನು ನಾಲ್ಕು ಅಥವಾ ಆರು ಪಥಗಳಲ್ಲಿ ನಿರ್ಮಿಸಲು ಚಿಂತನೆ ನಡೆದಿದೆ.

ಟ್ರಾಫಿಕ್ ಕಿರಿಕಿರಿ ತಪ್ಪಿಸಲು ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆ ಆಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ ಮಾಡಲು ಸರ್ಕಾರ ಪ್ಲ್ಯಾನ್ ಮಾಡುತ್ತಿದ್ದು, ಈ ಸಂಬಂಧ ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಒಳಗೊಂಡ ಒಂದು ಸಮಿತಿ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!