ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಬ್ಬರಿಗೆ ಬೆಂಬಲ ಬೆಲೆ ನಿರ್ಣಯ ಮಾಡದೇ ಇದ್ದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್.ಡಿ ರೇವಣ್ಣ ಹೇಳಿದ್ದಾರೆ.
ಕಲಾಪದಲ್ಲಿ ಮಾತನಾಡಿದ ಅವರು, ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಇವತ್ತೆ ನಿರ್ಧಾರ ಮಾಡಿ. ಇಲ್ಲವಾದಲ್ಲಿ ಇಲ್ಲೇ ಪಂಚೆ ಹಾಸಿಕೊಂಡು ಮಲಗ್ತೇವೆ. ಹೇಗೋ ಸ್ಪೀಕರ್ ರಾತ್ರಿಗೆ ಊಟ ಹಾಕಿಸ್ತಾರೆ. ಇವತ್ತೇ ಕೊಬ್ಬರಿಗೆ ಬೆಂಬಲ ಬೆಲೆ ಬಗ್ಗೆ ಸರ್ಕಾರ ನಿರ್ಣಯ ಮಾಡಬೇಕು. ಇಲ್ಲವಾದಲ್ಲಿ ಸದನದಲ್ಲಿ ಆಹೋರಾತ್ರಿ ಧರಣಿ ಮಾಡಬೇಕಾಗುತ್ತದೆ’ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.