ಸಹಾಯಕ ಪ್ರಾಧ್ಯಾಪಕರಾಗಲು ಪಿಹೆಚ್‌ಡಿ ಕಡ್ಡಾಯವಲ್ಲ: UGC

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಹಾಯಕ ಪ್ರಾಧ್ಯಾಪಕರಾಗಲು ಪಿಹೆಚ್‌ಡಿ ಕಡ್ಡಾಯವಲ್ಲ. ಐಚ್ಛಿಕವಾಗಲಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ಬುಧವಾರ ಪ್ರಕಟಿಸಿದೆ.

ಇಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET), ರಾಜ್ಯ ಅರ್ಹತಾ ಪರೀಕ್ಷೆ(SET) ಮತ್ತು ರಾಜ್ಯ ಮಟ್ಟದ ಅರ್ಹತಾ ಪರೀಕ್ಷೆ(SLET) ಕನಿಷ್ಠ ಮಾನದಂಡವಾಗಿದೆ ಎಂದು UGC ಪ್ರಕಟಿಸಿದೆ.

ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿಗಾಗಿ ಪಿಹೆಚ್‌ಡಿ ಅರ್ಹತೆ ಜುಲೈ 1, 2023 ರಿಂದ ಐಚ್ಛಿಕವಾಗಿರುತ್ತದೆ. ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿಗೆ NET/SET/SLET ಕನಿಷ್ಠ ಮಾನದಂಡವಾಗಿದೆ ಎಂದು ಯುಜಿಸಿ ಅಧ್ಯಕ್ಷ ಪ್ರೊ ಎಂ ಜಗದೇಶ್ ಕುಮಾರ್ ಹೇಳಿದ್ದಾರೆ.

ವಿಶ್ವವಿದ್ಯಾನಿಲಯ ಅನುದಾನ ಆಯೋಗ(ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಶಿಕ್ಷಕರು ಮತ್ತು ಇತರ ಶೈಕ್ಷಣಿಕ ಸಿಬ್ಬಂದಿಗಳ ನೇಮಕಾತಿಗಾಗಿ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ಇತರ ಕ್ರಮಗಳು) ನಿಯಮಗಳು, 2018′ ಗೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಜೂನ್ 30 ರ ಯುಜಿಸಿ ಗೆಜೆಟ್ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!