ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಎರಡು ತಿಂಗಳಿನಿಂದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಿಂತಿಲ್ಲ. ಪ್ರತಿದಿನವೂ ರಾಜ್ಯದ ಕೆಲವು ಭಾಗಗಳಿಂದ ಹಿಂಸಾಚಾರದ ವರದಿಗಳು ಬರುತ್ತಿವೆ. ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯಲು ಸರ್ಕಾರ ನಿರಂತರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಇಂಟರ್ನೆಟ್ ನಿಷೇಧದ ಅವಧಿಯನ್ನು ವಿಸ್ತರಿಸಿತು.
ರಾಜ್ಯ ಸರ್ಕಾರ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಇನ್ನೂ ಐದು ದಿನಗಳವರೆಗೆ ವಿಸ್ತರಿಸಿದೆ. ಜುಲೈ 10 ರಂದು ಮಧ್ಯಾಹ್ನ 3 ಗಂಟೆಯವರೆಗೆ ಮಣಿಪುರದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ. ಸಮಾಜವಿರೋಧಿಗಳು ಜನರಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಲು ಇಂಟರ್ನೆಟ್ ಅನ್ನು ಬಳಸಬಹುದು. ರಾಜ್ಯದಲ್ಲಿ ಹಿಂಸಾಚಾರ ಪ್ರಾರಂಭವಾದ ನಂತರ ಮೇ 3 ರಿಂದ ಇಂಟರ್ನೆಟ್ ಅನ್ನು ನಿಷೇಧಿಸಲಾಗಿದೆ.
ಈಶಾನ್ಯ ರಾಜ್ಯದ ತೌಬಲ್ನಲ್ಲಿ ಭಾರತೀಯ ರಿಸರ್ವ್ ಬೆಟಾಲಿಯನ್ (ಐಆರ್ಬಿ) ಉದ್ಯೋಗಿಯೊಬ್ಬರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪೊಲೀಸ್ ಶಸ್ತ್ರಾಗಾರದಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡಲು ಗಲಭೆಕೋರರ ಪ್ರಯತ್ನಗಳನ್ನು ಐಆರ್ಬಿ ಉದ್ಯೋಗಿ ವಿಫಲಗೊಳಿಸಿದ್ದರಿಂದ ಅವರ ಮನೆಗೆ ದುಚ್ಕರ್ಮಿಗಳು ಬೆಂಕಿ ಹಚ್ಚಿದ್ದರು.