ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ದಕ್ಷಿಣ ಕನ್ನಡ ಹಾಗೂ ಕಾಸರಗೋಡಿನಲ್ಲಿ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ಶ್ರೀ ದುರ್ಗಾ ಪರಮೇಶ್ವರಿ ದೇಗುಲ ಜಲಾವೃತವಾಗಿದೆ. ಭಾರೀ ಮಳೆಯಿಂದಾಗಿ ಶಾಂಭವಿ ನದಿಯಿಂದ ನೀರು ದೇಗುಲಕ್ಕೆ ಹರಿದು ಬಂದಿದೆ.