ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದೆ.
ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಹಾಗೂ ಉಡುಪಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದು, ಸ್ಥಳಕ್ಕೆ ಹೋಗಿ ಪರಿಶೀಲನೆ ಮಾಡುವಂತೆ ಸೂಚಿಸಿದ್ದಾರೆ. ಮಳೆಯಿಂದ ಎಲ್ಲೆಲ್ಲಿ ಹಾನಿಯಾಗಿದೆ, ಯಾವ ಕ್ರಮ ಕೈಗೊಂಡರೆ ಸೂಕ್ತವೋ ಆ ಕ್ರಮಗಳನ್ನು ಶೀಘ್ರವೇ ಕೈಗೊಳ್ಳಿ ಎಂದು ಸೂಚನೆ ನೀಡಿದ್ದಾರೆ.
https://twitter.com/CMofKarnataka/status/1676830665134985216?s=20