ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ ಹಲವು ಮಾರ್ಗಗಳಲ್ಲಿ ಸಂಚಾರ ನಡೆಸುತ್ತಿರುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಪ್ರಯಾಣ ದರವನ್ನು ಕಡಿಮೆ ಮಾಡಲು ರೈಲ್ವೆ ಇಲಾಖೆ ಚಿಂತನೆ ನಡೆಸಿದೆ.
ವಂದೇ ಭಾರತ್ ರೈಲಿನ ಸೇವೆಯನ್ನು ಜನರು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ರೈಲುಗಳ ಟಿಕೆಟ್ ದರವನ್ನು ಕಡಿಮೆ ಮಾಡುವ ಆಲೋಚನೆಯನ್ನು ಇಲಾಖೆಯು ಕೈಗೊಂಡಿದೆ.
ಟಿಕೆಟ್ ದರ ಜಾಸ್ತಿಯಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ವಂದೇ ಭಾರತ್ ರೈಲಿನಲ್ಲಿ ಸಂಚರಿಸುತ್ತಿಲ್ಲ. ಈ ಹಿನ್ನಲೆ ರೈಲ್ವೇ ಪರಿಶೀಲನೆಯ ನಂತರ, ಹೆಚ್ಚಿನ ಜನರು ರೈಲು ಸೇವೆಯನ್ನು ಬಳಸುವುದನ್ನು ಖಚಿತಪಡಿಸಿಕೊಳ್ಳಲು ವಂದೇ ಭಾರತ್ ಸೇವೆಯ ದರವನ್ನು ಗಮನಾರ್ಹವಾಗಿ ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ.