ಹೊಸದಿಗಂತ ಡಿಜಿಟಲ್ ಡೆಸ್ಕ್ :
ವಿಧಾನಸಭೆಯಲ್ಲಿ ಇಂದು ಜೆಡಿಎಸ್, ಬಿಜೆಪಿ ಕಾಂಗ್ರೆಸ್ ಸರಕಾರದ ವಿರುದ್ಧ ಮುಗಿಬಿದಿದ್ದು, ಇದರ ಬೆನ್ನಲ್ಲೇ ಕಲಾಪವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಲಾಯಿತು.
ನಾಳೆ ಬೆಳಗ್ಗೆ 9:30 ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ನಂತರ ಸಿದ್ದರಾಮಯ್ಯ ಬಜೆಟ್ ಮಂಡಿಸಲಿರುವ ಹಿನ್ನೆಲೆ ಕಲಾಪವನ್ನು ನಾಳೆ ಮಧ್ಯಾಹ್ನ 12 ಗಂಟೆಗೆ ಸ್ಪೀಕರ್ ಯು.ಟಿ ಖಾದರ್ ಮುಂದೂಡಿದರು.
ಕಲಾಪದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಪರಸ್ಪರ ವಾಗ್ವಾದಕ್ಕಿಳಿದರು.
ವಿಧಾನಸಭೆ ಕಲಾಪದಲ್ಲಿ ವರ್ಗಾವಣೆ ದಂಧೆ ವಿಚಾರ ಪ್ರತಿಧ್ವನಿಸಿದ್ದು, ವಿಪಕ್ಷಗಳು ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಗ್ವಾದ, ಕೋಲಾಹಲ ನಡೆದಿದೆ.ವಿಧಾನಸಭೆಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆ ಯತ್ನ ಪ್ರಕರಣ ಪ್ರಸ್ತಾಪಿಸಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ವರ್ಗಾವಣೆ ವಿಚಾರವಾಗಿಯೇ ಆತ್ಮಹತ್ಯೆಗೆ ಯತ್ನ ಎಂದು ಡೆತ್ ನೋಟ್ ಬರೆದಿಟ್ಟಿದ್ದಾಗಿ ಹೇಳಿದರು. ಅಲ್ಲದೇ ಇಂಧನ ಇಲಾಖೆಯಲ್ಲಿಯೂ ವರ್ಗಾವಣೆ ದಂಧೆ ನಡೆದಿದೆ ಎಂದು ಆರೋಪಿಸಿದರು.