ಅ.15 ರಿಂದ 24ರ ವರೆಗೆ ಮೈಸೂರು ದಸರಾ ಮಹೋತ್ಸವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪ್ರಸಕ್ತ ಸಾಲಿನ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ನಿಗದಿಯಾಗಿದ್ದು, ಅ.15 ರಿಂದ 24ರ ವರೆಗೆ ದಸರಾ ಮಹೋತ್ಸವ ನಡೆಯಲಿದೆ.

ಮೈಸೂರು ದಸರಾ ಮಹೋತ್ಸವ ಸಂಬಂಧ ಅರಮನೆ ಮಂಡಳಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಸಭೆ ನಡೆಸಿದ್ದಾರೆ. ಅಕ್ಟೋಬರ್ 15 ರಂದು ದಸರಾ ಉದ್ಘಾಟನೆಗೊಳ್ಳಲಿದ್ದು, ಅಕ್ಟೋಬರ್ 24 ರಂದು ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ವಿಧಾನಸಭೆ ಅಧಿವೇಶನ ಮುಗಿದ ಬಳಿಕ ದಸರಾ ಉನ್ನತ ಮಟ್ಟದ ಸಮಿತಿ ಮತ್ತೊಂದು ಸಭೆ ನಡೆಸುವ ಸಾಧ್ಯತೆ ಇದೆ. ದಸರಾ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ನೀಡಲಾಗುವ ಅನುದಾನದ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಬೇಕು, ಬಳಿಕ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!