ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಶ್ಮೀರದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.
ಹವಾಮಾನ ವೈಪರೀತ್ಯದಿಂದಾಗಿ ಬಾಲ್ವಾಲ್ ಹಾಗೂ ಪಹಲ್ಗಾಮ್ ಅವಳಿ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ಬೆಳಗ್ಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಯಾವುದೇ ಯಾತ್ರಾರ್ಥಿಗಳಿಗೆ ಪವಿತ್ರ ಗುಹಾಂತರ ದೇಗುಲದ ಬಳಿ ತೆರಳಲು ಅನುಮತಿ ನೀಡಿಲ್ಲ.
ಚಂದರಕೋಟ್ ಬಳಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ, ಇಂದು ಮುಂಜಾನೆಯಿಂದಲೂ ಭಾರೀ ಮಳೆ ಸುರಿಯುತ್ತಿದ್ದು, ಬಾಲ್ಟಾಲ್ ಹಾಗೂ ನುನ್ವಾನ್ ಬೇಸ್ ಕ್ಯಾಂಪ್ಗಳಲ್ಲಿ ಯಾತ್ರಾರ್ಥಿಗಳಿಗೆ ಆಶ್ರಯ ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.