ಜನತೆಯೇ ನನ್ನ ಪಾಲಿನ ಜನಾರ್ಧನರು; ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ: ಸಿಎಂ ಸಿದ್ಧರಾಮಯ್ಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೂತನ ಕಾಂಗ್ರೆಸ್‌ ಸರ್ಕಾರದ ಮೊದಲ ಬಜೆಟ್‌ ಅನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಂಡಿಸುತ್ತಿದ್ದಾರೆ. ಈ ಕುರಿತು ಅವರು ಟ್ವೀಟ್‌ ಮಾಡಿದ್ದು, ಜನರ ಆಶೀರ್ವಾದ ಇರಲಿ ಎಂದು ಹೇಳಿದ್ದಾರೆ.

ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಟ್ವಿಟ್‌ ಮಾಡಿದ್ದು, “ಜನತೆಯೇ ನನ್ನ ಪಾಲಿನ ಜನಾರ್ಧನರು, ಇನ್ನು ಕೆಲವೇ ಹೊತ್ತಿನಲ್ಲಿ ನನ್ನ 14ನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ” ಎಂದಿದ್ದಾರೆ.

ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

“ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ” ಎಂದು ಬಜೆಟ್​​ ಮಂಡನೆಗೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1677191925395492866?s=20

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!