ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸೌಧದಲ್ಲಿ ಸರ್ಕಾರದ ಆಯವ್ಯಯ ಮಂಡಿಸುತ್ತಿರುವ ಸಿದ್ದರಾಮಯ್ಯ, ತಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಿಟ್ಟಿ ಕೊಡುಗೆಗಳಲ್ಲ ಎಂದರು. ರಾಜ್ಯದ ಬಡಜನರು, ಮಹಿಳೆಯರು, ನಿರುದ್ಯೋಗಗಳಿಗೆ ನೆರವಾಗಲು ಯೋಜಿಸಿರುವ ಯೋಜನೆಗಳವು. ಆದಷ್ಟು ಶೀಘ್ರದಲ್ಲಿ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗುವುದು.
ಈಗಾಗಲೇ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ ತಿಂಗಳಿನಲ್ಲಿ ಜಾರಿಗೆ ತರುತ್ತೇವೆ. ಯುವನಿಧಿ ಯೋಜನೆಯು ಪದವಿ ಪಡೆದ ಯುವಜನರಿಗಾಗಿ ಜಾರಿಗೆ ಬರಲಿದೆ. ಅನ್ನಭಾಗ್ಯದಡಿ ಕೇಂದ್ರ ಸರ್ಕಾರದಿಂದ ಒದಗಿಸುತ್ತಿರುವ ಐದು ಕೆ.ಜಿ ಅಕ್ಕಿಯೊಂದಿಗೆ ನಾವು ಹೆಚ್ಚುವರಿ ಐದು ಕೆಜಿ ಸೇರಿದಂತೆ ಒಟ್ಟಾರೆ 10 ಕೆ.ಜಿ ಅಕ್ಕಿಯನ್ನು ಪ್ರತಿ ತಿಂಗಳು ವಿತರಿಸಲು ಬದ್ಧರಾಗಿದ್ದೇವೆ.
ನಮ್ಮ ಯೋಜನೆಗಳಾವು ಬಿಟ್ಟಿ ಕೊಡುಗೆಗಳಲ್ಲ ಎಂದು ಹೇಳುತ್ತಾ ಈ ಸಂದರ್ಭದಲ್ಲಿ ಬಾಬಾಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ಚಿಂತನೆಯನ್ನು ಸ್ಮರಿಸುತ್ತೇನೆ ಎಂದರು.