ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಬಜೆಟ್‌ನಲ್ಲಿ ಈ ಬಾರಿ ರೇಷ್ಮೆ ಮಾರುಕಟ್ಟೆಗೆ ಬಂಪರ್ ಕೊಡುಗೆ ನೀಡಲಾಗಿದೆ.
ಶಿಡ್ಲಘಟ್ಟದಲ್ಲಿ 75 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ಸ್ಥಾಪನೆಗೆ ಸಿದ್ದರಾಮಯ್ಯ ಸರ್ಕಾರ ಅಸ್ತು ಎಂದಿದೆ. ಇನ್ನು ಚಿಕ್ಕಮಗಳೂರಿನಲ್ಲಿ ಕಾಫಿ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದ್ದಾರೆ. ತೆಂಗು, ಅಡಿಕೆ, ದ್ರಾಕ್ಷಿ ಹಾಗೂ ದಾಳಿಂಬೆ ಬೆಳೆ ಸಂಸ್ಕರಣೆಗೆ 10 ಕೋಟಿ ವೆಚ್ಚದಲ್ಲಿ ಯೋಜನೆ ಜಾರಿ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.