STATE BUDGET 2023| ರೈತರಿಗೆ ಗುಡ್‌ ನ್ಯೂಸ್: ಶೂನ್ಯ ಬಡಿದರ ಸಾಲದ ಮಿತಿ 5 ಲಕ್ಷಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನೂತನ ಕಾಂಗ್ರೆಸ್‌ ಸರ್ಕಾರದ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ರೈತರಿಗೆ ಸಿಹಿ ಸುದ್ದಿ ನೀಡಿದೆ.

ರಾಜ್ಯದ ರೈತರಿಗೆ ಶೂನ್ಯ ಬಡಿದರ ಸಾಲದ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇದೇ ವೇಳೆ ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು ಎಂದು ಬಂಪರ್‌ ಘೋಷಣೆಯನ್ನು ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!