STATE BUDGET 2023| ರಾಜ್ಯದ ಆರ್ಥಿಕ ಬೆಳವಣಿಗೆ ದರ ಘೋಷಿಸಿದ ಸಿಎಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಸರ್ಕಾರದ ಮೊದಲ ಬಜೆಟ್‌ ಅನ್ನು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿದ್ದು, ಈ ವೇಳೆ ರಾಜ್ಯದ ಆರ್ಥಿಕ ಬೆಳವಣಿಗೆ ದರವನ್ನು ಘೋಷಿಸಿದ್ದಾರೆ.

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ “ರಾಜ್ಯದ ಅರ್ಥವ್ಯವಸ್ಥೆಯು ಹಿಂದಿನ ಸರ್ಕಾರದ ಅವಧಿಯಲ್ಲಿ ಹದಗೆಟ್ಟಿರುತ್ತದೆ. ಕೇಂದ್ರ ಸಾಂಖ್ಯಿಕ ಕಛೇರಿಯು ಬಿಡುಗಡೆ ಮಾಡಿರುವ ಮುಂಗಡ ಅಂದಾಜುಗಳ ಪ್ರಕಾರ ರಾಜ್ಯದ ಜಿ.ಎಸ್.ಡಿ.ಪಿ ಯು 2022-23ರಲ್ಲಿ ಶೇ. 7.9 ರಷ್ಟು ಬೆಳವಣಿಗೆ ದಾಖಲಿಸಿದೆ. 2021-22 ರಲ್ಲಿ ರಾಜ್ಯದ ಜಿ.ಎಸ್.ಡಿ.ಪಿ ಬೆಳವಣಿಗೆಯು ಶೇ.11 ರಷ್ಟು ದಾಖಲಾಗಿತ್ತು. 2022-23ರ ವಲಯವಾರು ಬೆಳವಣಿಗೆಯನ್ನು ಗಮನಿಸಿದರೆ, ಕೃಷಿ, ಕೈಗಾರಿಕೆ ಮತ್ತು ಸೇವಾ ವಲಯಗಳಲ್ಲಿನ ಬೆಳವಣಿಗೆಯು ಶೇ. 5.5, 5.1 ಮತ್ತು 9.2 ರಷ್ಟು ಬೆಳವಣಿಗೆಯನ್ನು ದಾಖಲಿಸಿರುತ್ತದೆ” ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!