ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ಯಾರೆಂಟಿಗಳ ಜಾರಿಗೆ ಸಾಕಷ್ಟು ಕೋಟಿ ಅವಶ್ಯವಿದೆ, ಆದರೆ ಈ ಹಣ ಎಲ್ಲಿಂದ ಬರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಾಕಷ್ಟು ಬಾರಿ ಪ್ರಶ್ನೆಗಳು ಎದುರಾಗಿದ್ದವು. ಇದೀಗ ಈ ಪ್ರಶ್ನೆಗೆ ಸಿಎಂ ಉತ್ತರ ನೀಡಿದ್ದಾರೆ.
ಗ್ಯಾರಂಟಿಗಳ ಜಾರಿಗೆ ಶೇ. 26ರಷ್ಟು ಸಾಲವನ್ನು ಪಡೆಯಲು ಸರ್ಕಾರ ನಿರ್ಧಾರ ಮಾಡಿದೆ. ಶೇ.4ರಷ್ಟು ಅನುದಾನ ಕೇಂದ್ರದಿಂದ ಬರುವ ನಿರೀಕ್ಷೆ ಇದೆ, ಇನ್ನು ಶೇ.50ರಷ್ಟು ತೆರಿಗೆ ಆದಾಯದಿಂದ ಹಣ ಹೊಂದಿಸಲು ನಿರ್ಧರಿಸಲಾಗಿದೆ.