ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಮಾಡಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ ತೆಗೆದುಹಾಕಿದೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಬದಲು ನೂತನ ಶಿಕ್ಷಣ ನೀತಿ ರೂಪಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಕಲಿ ಅಂಕಪಟ್ಟಿ ಹಾವಳಿ ತಡೆಯಲು ಎಲ್ಲವನ್ನೂ ಡಿಜಿಟಲ್ ಮಾಡಲಾಗುವುದು ಎಂದು ಹೇಳಿದ್ದಾರೆ.