ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಟೆಟ್ ಮಂಡಿಸುತ್ತಿದ್ದಾರೆ. ಬಜೆಟ್ ನಲ್ಲಿ ರಾಜ್ಯ ಸರ್ಕಾರವು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿರುವುದಾಗಿ ಸಿಎಂ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣಾ ವೆಚ್ಚ ಗರಿಷ್ಠ 45,000 ರೂ.ಗಳ ವರೆಗೆ ಹೆಚ್ಚಿಸಲಾಗಿದೆ. 153 ಕೋಟಿ ರೂ. ಅನುದಾನ. ಶಾಲೆ, ಕಾಲೇಜುಗಳ ಕೊಠಡಿಗಳ ನಿರ್ಮಾಣ, ದುರಸ್ತಿಗೆ 650 ಕೋಟಿ ರೂ. ಹಾಗೂ ಶೌಚಾಲಯ ಘಟಕ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
https://twitter.com/CMofKarnataka/status/1677226219509776385?s=20