ಹೊಸದಿಗಂತ ಡಿಜಿಟಲ್ ಡೆಸ್ಕ್:
ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಟೆಟ್ ಮಂಡಿಸಿದ್ದಾರೆ. ಬಜೆಟ್ ನಲ್ಲಿ ಕಾಂಗ್ರೆಸ್ ಸರ್ಕಾರದ ಐದನೇ ಗ್ಯಾರಂಟಿಯಾದ ಯುವನಿಧಿ ಯೋಜನೆ ಜಾರಿ ಮಾಡುವುದಾಗಿ ಘೋಷಿಸಿದ್ದಾರೆ.
ಶಿಕ್ಷಣ ಪಡೆದು ಉದ್ಯೋಗ ಹಿಡಿಯುವ, ಸಾಧನೆ ಕನಸು ಕಾಣುತ್ತಿರುವ ಯುವಜನರಿಗೆ ಉದ್ಯೋಗ ಪಡೆಯಲು ಸಾಧ್ಯವಾಗದ ಸಂದರ್ಭದಲ್ಲಿ ಅವರಿಗೆ ಬೆನ್ನೆಲುಬಾಗಿ ನಿಲ್ಲಲು 5ನೇ ಗ್ಯಾರಂಟಿ ಆದ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ನೀಡುವ ʻಯುವನಿಧಿʼ ಯೋಜನೆ ಜಾರಿ ಮಾಡಲಾಗುವುದು. ಯುವಜನ ಅಡ್ಡದಾರಿ ಹಿಡಿಯದಂತೆ, ಅತ್ಮಸ್ತೈರ್ಯ ತುಂಬಲು ಈ ಆರ್ಥಿಕ ನೆರವನ್ನು ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ.
https://twitter.com/CMofKarnataka/status/1677231831505330176?s=20