ರಾಜ್ಯದೆಲ್ಲೆಡೆ ಇಂದು ಕಾಂಗ್ರೆಸ್ ಪ್ರತಿಭಟನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಕಾಂಗ್ರೆಸ್ ಸರ್ಕಾರ ರಾಜ್ಯ ಬಜೆಟ್ ಮಂಡಿಸಿದ್ದು, ಇನ್ನೇನು ಕೆಲವೇ ಸಮಯದಲ್ಲಿ ಕಾಂಗ್ರೆಸ್ ಪ್ರತಿಭಟನೆ ಆರಂಭಿಸುತ್ತಿದೆ. ಸೂರತ್ ನಗರದ ನ್ಯಾಯಾಲಯದಲ್ಲಿದ್ದ ಮಾನಹಾನಿ ಪ್ರಕರಣವೊಂದರಲ್ಲಿ ಎರಡು ವರ್ಷ ಸೆರೆವಾಸ ತೀರ್ಪಿನ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮನವಿ ಸಲ್ಲಿಸಿದ್ದರು.

ಈ ಮನವಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ, ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ದೊಡ್ಡ ಪ್ರತಿಭಟನೆ ಮುಂದಾಗಿದೆ. ರಾಗಾ ಅವರ ಜನಪ್ರಿಯತೆಯಿಂದ ಬಿಜೆಪಿಗೆ ಹೊಟ್ಟೆ ಉರಿ ಆಗುತ್ತಿದೆ. ಹೀಗಾಗಿ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!